ಬುಧವಾರ, ಅಕ್ಟೋಬರ್ 07, 2009

ಕೆರೆಯ ನೀರನು ಕೆರೆಗೆ ಚೆಲ್ಲಿ

ಎಲ್ಲ ಕಡೆ ನೆರೆ ಪರಿಹಾರ ನಿಧಿ ಸಂಗ್ರಹಣೆ ಜೋರಾಗಿ ನಡೆಯುತ್ತಿದೆ. ಬೆಂಗಳೂರಿನಲ್ಲೂ ಕೂಡ ಇವತ್ತು ಭರ್ಜರಿ ಜಾಥಾ ಇತ್ಯಾದಿಗಳು ನಡೆದು ಕೋಟ್ಯಾಂತರ ರೂಪಾಯಿ ಸಂಗ್ರಹ ಆಗಿರುವುದು ಸಂತಸದ ವಿಚಾರ.

ಏನಾಗಿದೆ ಅಂದ್ರೆ, ಎಲ್ಲ ಪಕ್ಷಗಳೂ ಕೂಡ ಗಲ್ಲಿ ಗಲ್ಲಿ, ಬೀದಿ ಬೀದಿ, ಮುಖ್ಯ ರಸ್ತೆಗಳಲ್ಲಿ ಸುತ್ತುತ್ತಿದ್ದು, ಕೆಲ ಪುಂಡು ಲೀಡರುಗಳಿಗೆ ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳಲು ಇದು ಸದವಕಾಶ. ಇವತ್ತು ಹೀಗೊಂದು ಘಟನೆ ಆಯಿತು.

ಘನತೆವೆತ್ತ ಪಕ್ಷದ ಘನತೆವೆತ್ತ ಮುಖಂಡರೊಬ್ಬರು ನಿಧಿ ಸಂಗ್ರಹದ ಡಬ್ಬಿ ಹಿಡಿದು ಅಂಗಡಿ ಅಂಗಡಿ ಬಾಗಿಲಿಗೆ ಹೋಗುವುದೂ, ಅವರು ಹೋದಕೂಡಲೇ ಅಂಗಡಿ ಮಾಲಿಕ ಹತ್ತೋ, ಐವತ್ತೋ, ನೂರೋ ರೂಪಾಯಿ ಹಾಕುವುದೂ ನಡೆದೇ ಇತ್ತು. ಟೀವೀ ಚಾನಲಿನ ಕ್ಯಾಮರಾಗಳೂ ಹಿಂಬಾಲಿಸಿದ್ದವು.

ಒಂದೆಡೆ ಕ್ಯಾಮರಾಗಳು ಮುಂದೆ ಹೋದವು, ಶ್ರೀಯುತರೂ ಕ್ಯಾಮರಾಗೆ ಪೋಸುಕೊಡುತ್ತ ಶಾಪ್ ಓನರ್ ಎದುರು ಡಬ್ಬಿ ಹಿಡಿದರು, ಅವರು ಅದೆಷ್ಟೋ ದುಡ್ಡು ತುರುಕಿ ತಾವೂ ಕ್ಯಾಮರಾಗೆ ಹಲ್ಕಿರಿದರು. ಮುಖಂಡ ಮಹಾಶಯರು, "ದೇಣಿಗೆ ನೀಡಿದ್ದಕ್ಕೆ ಸಂತೋಷ, ಥ್ಯಾಂಕ್ಸು" ಅಂದಾಗ ಆ ಪುಣ್ಯಾತ್ಮ - ಅಯ್ಯ ನಿಮ್ದೇ ದುಡ್ಡು ನಿಮ್ದೇ ಡಬ್ಬಿ ಅದಿಕ್ಕೆಲ್ಲ ಯಾಕೆ ಥ್ಯಾಂಕ್ಸು ಬಿಡೀ ಸಾರ್" ಅಂದು ಬಿಟ್ಟರು! ಪಾಪ, ಲೀಡರ್ರು ತಬ್ಬಿಬ್ಬು! ಅದ್ನೆಲ್ಲ ಏನ್ ಹೇಳ್ತೀರಿ ಮರ್ಯಾದಿ ಕಳೀಬೇಡಿ ಅಂತ ಬಡಬಡನೆ ಮುಂದೋಡಿತು ಸವಾರಿ..

ವಿಷ್ಯ ಏನೂಂತ ಕೇಳಿದ್ರೆ, ಈ ಮುಖಂಡರಿಗೆ ಮೂರು ಚೇಲಾಗಳು.. ಅವರು, ಎಲ್ಲರಿಗಿಂತ ಮೊದಲು ಅಂಗಡಿಗಳಿಗೆ ಹೋಗಿ, ವಿಶ್ಯ ಹೀಗೀಗೆ, ದುಡ್ಡು ಕೊಡಿ ಅನ್ನೋದು.. ಅಲ್ಲಿದ್ದವ್ರು ಜೈ ಅಂದ್ರೆ ಸಂತೋಷ.. ಇಲ್ಲದೇ ಇದ್ದರೆ, ಆ ಶಾಪ್ ನ ಗೆಟಪ್ ನೋಡಿ ಯಥಾಸಾದ್ಯ ದುಡ್ಡು ಕೈಲಿ ಹಿಡಿಸಿ, ಹಾಕಿ ಇದ್ನ ಪ್ಲೀಸ್, ನಮ್ ಸಾಯಬ್ರುದು ಮರ್ಯಾದೆ ಪ್ರಶ್ನೆ ಅನ್ನೋದು..

ಕೆರೆಯ ನೀರನು ಕೆರೆಗೆ ಚೆಲ್ಲಿ ವರವ ಪಡೆದವರಂತೆ ಕಾಣಿರೋ!

9 ಕಾಮೆಂಟ್‌ಗಳು:

ವಿ.ರಾ.ಹೆ. ಹೇಳಿದರು...

irli biDi, hengo otnalli dEnige siguttalla :)

Harsha Bhat ಹೇಳಿದರು...

@vi.ra. he

istella natka madida mandi adannenu tagandu hoogi santrustarige kodatare andkandra? ella nataka

ತೇಜಸ್ವಿನಿ ಹೆಗಡೆ ಹೇಳಿದರು...

:D :D

ರಂಜನಾ ಹೆಗ್ಡೆ ಹೇಳಿದರು...

ಅಲ್ಲಿ ಮನೆ ಮಠ ಇಲ್ಲದೆ ಕಷ್ಟ ಪಡ್ತಾ ಇದ್ದಾ ಎಲ್ಲರು ಇವು ಇಲ್ಲಿ ಅವರ ಹೆಸರಲ್ಲಿ ಹಿಂಗೆಲ್ಲಾ ಮಾಡ್ತಾ ಇದ್ದ. ನಾಚ್ಕೆ ಯಾಕೆ ಆಗದಿಲ್ಯೋ?

ವಿನಾಯಕ ಕೆ.ಎಸ್ ಹೇಳಿದರು...

dosta ivaattinnu press club li idne maatu aadidya. ee hesaralli adestu jana duddu maadtvo, estu ngo srusti aaydo gottille! huduki hodre front anchor story nodu!

sunaath ಹೇಳಿದರು...

ಓಹೋ, ಹೀಗೋ ವಿಷ್ಯ!

ಶಾಂತಲಾ ಭಂಡಿ (ಸನ್ನಿಧಿ) ಹೇಳಿದರು...

idakke bEjaaraagadu

jomon varghese ಹೇಳಿದರು...

ಯಾರದೋ ದುಡ್ಡು, ಯಲ್ಲಮ್ಮನ ಜಾತ್ರೆ..

ಸೀತಾರಾಮ. ಕೆ. / SITARAM.K ಹೇಳಿದರು...

ದುಡ್ಡು ಸ೦ತ್ರಸ್ತರಿಗೆ ಮುಟ್ಟಿದ್ರೆ ಹೀಗೆ ಸ೦ಗ್ರಹವಾದ್ರೂ ಪರ್ವಾಗಿಲ್ಲ. ಚೆ೦ದದ ಬರಹ.